Followers

Followers somaling m uppar

Thursday, January 2, 2025

SSLC Exam model question papers2025


ಪ್ರಕಟಿತ ವೇಳಾಪಟ್ಟಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 20-03-2025ರಿಂದ ಆರಂಭಗೊಂಡು, ದಿನಾಂಕ 02-04-2025ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ದಿನಾಂಕ 01-03-2025ರಿಂದ ಆರಂಭಗೊಂಡು ದಿನಾಂಕ 19-03-2025ರವರೆಗೆ ನಡೆಯಲಿದೆ ಎಂದಿದೆ.

ಹೀಗಿದೆ ವಿಷಯವಾರು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ

ದಿನಾಂಕ 20-03-2025ರ ಗುರುವಾರ- ಪ್ರಥಮ ಭಾಷೆ - ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್ ಸಿ ಇಆರ್ ಟಿ, ಸಂಸ್ಕೃತ
ದಿನಾಂಕ 22-03-2025ರ ಶನಿವಾರ - ಕೋರ್ ಸಬ್ಜೆಕ್ಟ್ - ಸಮಾಜ ವಿಜ್ಞಾನ
ದಿನಾಂಕ 24-03-2025ರ ಸೋಮವಾರ - ದ್ವಿತೀಯ ಭಾಷೆ - ಇಂಗ್ಲೀಷ್, ಕನ್ನಡ
ದಿನಾಂಕ 27-03-2025ರ ಗುರುವಾರ - ಕೋರ್ ಸಬ್ಜೆಕ್ಟ್ - ಗಣಿತ, ಸಮಾಜ ಶಾಸ್ತ್ರ
ದಿನಾಂಕ 29-03-2025ರ ಶನಿವಾರ - ತೃತೀಯ ಭಾಷಣೆ - ಹಿಂದಿ ಎನ್ ಸಿ ಇ ಆರ್ ಟಿ, ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್ ಎಸ್ ಕ್ಯೂ ಎಫ್ ವಿಷಯ- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಬ್ಯೂಟಿ ಅಂಡ್ ವೆಲ್ ನೆಸ್, ಅಪರೆಲ್ ಮೇಡ್ ಆಪ್ಸ್ ಮತ್ತು ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಹಾರ್ಡ್ ವೇರ್.
ದಿನಾಂಕ 01-04-2025ರ ಮಂಗಳವಾರ - ಜೆಟಿಎಸ್ ವಿಷಯಗಳು - ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ರ್ಟಾನಿಕ್ಸ್ ಇಂಜಿನಿಯರಿಂಗ್-IV, ಪ್ರೋಗ್ರಾಮಿಂಗ್ ಇನ್ ANSI C.
ದಿನಾಂಕ 02-04-2025ರ ಬುಧವಾರ - ಕೋರ್ ಸಬ್ಜೆಕ್ಟ್ - ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.

2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಇನ್ನೂ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಯನ್ನು ಇಲಾಖೆ ಪ್ರಕಟಿಸಿದೆ. ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಮಾತ್ರ ಸಿದ್ಧಪಡಿಸಲಾಗಿದೆ. ಮಂಡಳಿಯ ಜಾಲತಾಣದಲ್ಲೂ ಅಪ್ ಲೋಡ್ ಮಾಡಲಾಗಿದೆ. ಇನ್ನುಳಿದ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಉಳಿದ ಮಾಧ್ಯಮಗಳಿಗೆ ಆಯಾ ಶಾಲಾ ಹಂತದಲ್ಲಿ ಭಾಷಾಂತರಿಸಿ ವಿದ್ಯಾರ್ಥಿಗಳಿಗೆ ನೀಡಲು ಇಲಾಖೆ ತಿಳಿಸಿದೆ.

ಪ್ರೌಢ ಶಾಲೆಯ ಮುಖ್ಯ ಶಿಕ್ಷಕರು 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಅಧಿಕೃತ ಜಾಲತಾಣ https://kseeb.karnataka.gov.in/sslc2025modelqp/ ನಿಂದ ಡೌನ್ ಲೋಡ್ ಮಾಡಿಕೊಂಡು ಶಾಲಾ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡುವಂತೆ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ.

ಈ ಹಂತ ಅನುಸರಿಸಿ ಎಸ್ ಎಸ್ ಎಲ್ ಸಿ ಮಾದರಿ ಪ್ರಶ್ನೆ ಪತ್ರಿಕೆ ಡೌನ್ ಲೋಡ್ ಮಾಡಿಕೊಳ್ಳಿ

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು https://kseeb.karnataka.gov.in/sslc2025modelqp/ ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ನೇರವಾಗಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

https://kseeb.karnataka.gov.in/sslc2025modelqp/ ಗೆ ಭೇಟಿ ನೀಡಿ
ಆ ಬಳಿಕ ಲಿಂಕ್ ನಲ್ಲಿ ವಿಷಯವಾರು 2025ರ ಎಸ್ ಎಸ್ ಎಲ್ ಸಿ ಮಾದರಿ ಪ್ರಶ್ನೆ ಪತ್ರಿಕೆಗಳ ಪಟ್ಟಿ ಗೋಚರಿಸಲಿದೆ
ಶಾಲಾ ವಿದ್ಯಾರ್ಥಿಗಳು ತಮ್ಮ ವಿಷಯವಾರು ಎಸ್ ಎಸ್ ಎಲ್ ಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

No comments:

Post a Comment